ರೈಲಿನಲ್ಲಿ ಸಾರ್ವಜನಿಕರ ಎದುರಲ್ಲೇ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ

ಶನಿವಾರ, 5 ಏಪ್ರಿಲ್ 2014 (13:50 IST)
ಭಾರತದಲ್ಲಿ ವಿದೇಶಿಯರ ಮೇಲೆ ನಡೆದ ಆತ್ಯಾಚಾರಕ್ಕೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ಮಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಜರ್ಮನ್‌ ಮಹಿಳೆಯೊಬ್ಬರ ಮೇಲೆಅತ್ಯಾಚಾರ ನಡೆದ ಬಗ್ಗೆ ವರದಿಯಾಗಿದೆ.

ಪ್ರಕರಣದ ಸಂಬಂಧ ಈಗಾಗಲೇ ಎಫ್ಐಆರ್‌ ದಾಖಲಿಸಿರುವ ರೈಲ್ವೆ ಪೊಲೀಸರು ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಅತ್ಯಾಚಾರ ನಡೆಸಿದ ಆರೋಪಿ ಮಂಗಳೂರಿಗೆ ಬಂದಿದ್ದು ಈತನ ಪತ್ತೆಗಾಗಿ ಪೊಲೀಸ್‌ ಆಧಿಕಾರಿಗಳು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ