ಲೋಕಾಯುಕ್ತರ ಬೇಟೆಗೆ ಸಿಕ್ಕಿಬಿದ್ದವು ಭರ್ಜರಿ ಮಿಕಗಳು

ಬುಧವಾರ, 30 ಅಕ್ಟೋಬರ್ 2013 (15:49 IST)
PR
PR
ಇಂದು ಬೆಳ್ಳಂ ಬೆಳಿಗ್ಗೆ ಭ್ರಷ್ಟರ ಬೇಟೆಗಾಗಿ ನಿಂತ ಲೋಕಾಯುಕ್ತರಿಗೆ ಭಾರೀ ಮಿಕಗಳೇ ಸಿಲುಕಿಹಾಕಿಕೊಂಡಿವೆ. ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತರು ಕೋಟಿ ಕೋಟಿ ಬೆಲೆ ಬಾಳುವ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಗುಲ್ಬರ್ಗಾ, ದಾವಣಗೆರೆ, ಹುಬ್ಬಳ್ಳಿ, ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತರು ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಿಢೀರ್‌ ದಾಳಿ ನಡೆಸಿದ್ದಾರೆ. ಮನೆಯೊಳಗಿದ್ದ ಎಲ್ಲಾ ದಾಖಲೆ ಪತ್ರಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸರ್ಕಾರಿ ಅಧಿಕಾರಿಗಳು ಅಕ್ರಮ ಆಸ್ತಿಯನ್ನು ಸಂಪಾದನೆ ಮಾಡಿದ್ದಾರೆ ಎಂದು ಕೇಳಿಬಂದ ದೂರನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ.

ಬಲೆಗೆ ಬಿದ್ದ ಮಿಕಗಳು ಯಾವುವು? ಇನ್ನಷ್ಟು ಸುದ್ದಿ ಮುಂದಿನ ಪುಟದಲ್ಲಿ...

PR
PR
ಬಲೆಗೆ ಬಿದ್ದ ಮಿಕಗಳು ಯಾವುವು?

೧. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯಿತಿಯ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.
ಇದುವರೆಗೆ ಎರಡು ನಿವೇಶನಗಳು, ನಾಲ್ಕು ಬ್ಯಾಂಕ್ ಖಾತೆಗಳ ವಿವರಗಳು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದು, ಇನಜ್ನಷ್ಟು ದಾಖಲೆ ಪತ್ರಗಳಿಗಾಗಿ ಶೋಧನೆ ನಡೆಸುತ್ತಿದ್ದಾರೆ.

೨. ಗುಲ್ಬರ್ಗಾ ಜಿಲ್ಲೆಯ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ವೀರಭದ್ರಪ್ಪ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರಭದ್ರಪ್ಪ ಅವರಿಗೆ ಸೇರಿದ ಮೂರು ಮನೆ ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದಿರುವ ಲೋಕಾಯುಕ್ತ ಪೊಲೀಸರು, ಆಸ್ತಿಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ