ವಿದ್ಯುತ್ ತಂತಿ ಹರಿದು 15 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ.

ಗುರುವಾರ, 13 ಫೆಬ್ರವರಿ 2014 (10:11 IST)
PR
PR
ಮನೆಗಳ ಮೇಲೆ ವಿದ್ಯುತ್ ತಂತಿ ಬಿದ್ದು 15 ಕ್ಕೂ ಹೆಚ್ಚು ಮನೆಗಳ ಪೀಠೋಪಕರಣಗಳು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲ್ಲೂಕಿನ ಚಿಕ್ಕಕೊಣತಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ಶಾರ್ಟ ಸರ್ಕ್ಯುಟ್ ನಿಂದಾಗಿ ಈ ಅವಘಡ ಸಂಭವಿಸಿದೆ. 1 ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಇನ್ನೊಂದು ಮನೆಗೆ ಭಾಗಶಃ ಹಾನಿಯಾಗಿದೆ.

50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಹೀರೆಕೆರೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಯು ಬಿ ಬಣಕಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ

ವೆಬ್ದುನಿಯಾವನ್ನು ಓದಿ