ವಿಧಾನಸಭಾ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ

ಶುಕ್ರವಾರ, 31 ಮೇ 2013 (09:23 IST)
PR
PR
ಬಿಜೆಪಿ ಅಭ್ಯರ್ಥಿ ನಿಧನದ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇತ್ತೀಚೆಗೆ ನಡೆದಿದ್ದು, ಇಂದು ನಡೆದ ಮತ ಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‌ನ ಮಹಾದೇವ್ ಅವರಿಗಿಂತ 1000 ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈಗ ಐದನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಜೆಡಿಎಸ್‌ನ ಮಹಾದೇವ್ ಐದನೇ ಸುತ್ತಿನ ಮತ ಎಣಿಕೆ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಅವರಿಗಿಂತ 1000 ಮತಗಳ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನುಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದ್ದು ವಿಜಯಲಕ್ಷ್ಮೀ ಯಾರ ಪಾಲಿಗೆ ಒಲಿಯಲಿದೆ ಎಂಬುದು ಕುತೂಹಲಕಾರಿಯಾಗಿದೆ. ಇನ್ನುಳಿದಂತೆ ಬಿಜೆಪಿ, ಕೆಜೆಪಿ ಹಾಗೂ ಬಿಎಸ್ಆರ್ ಪಕ್ಷಗಳ ಅಭ್ಯರ್ಥಿಗಳು ಅತ್ಯಂತ ಕಡಿಮೆ ಮತಗಳನ್ನು ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ