ಮಂತ್ರಿ ಸ್ಥಾನದಿಂದ ತೆಗೆದ್ರೆ ಬೆಂಝ್ ಕಾರಿನಲ್ಲಿ ಓಡಾಡುತ್ತೇನೆ: ಶಾಮನೂರು ಶಿವಶಂಕರಪ್ಪ
ಶನಿವಾರ, 18 ಜೂನ್ 2016 (15:15 IST)
ಈಗ ಸಚಿವನಾಗಿ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದೇನೆ.ಮಂತ್ರಿ ಸ್ಥಾನ ಹೋದರೆ ಬೆಂಝ್ ಕಾರಿನಲ್ಲಿ ಓಡಾಡುತ್ತೇನೆ ಎಂದು ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸಂಪುಟ ಪುನಾರಚನೆಯಲ್ಲಿ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಶಾಮನೂರು, ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಯ ಪರಮಾಧಿಕಾರ ಅದನ್ನು ಪ್ರಶ್ನಿಸುವ ಹಕ್ಕು ನಮಗಿಲ್ಲ ಎಂದರು.
ಸಚಿವನಾಗಿ ಇನೋವಾ ಕಾರಿನಲ್ಲಿ ಓಡಾಡುತ್ತೇನೆ. ಮಂತ್ರಿ ಸ್ಥಾನದಿಂದ ತೆಗೆದರೆ ಬೆಂಝ್ ಕಾರಿನಲ್ಲಿ ಓಡಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎನ್ನುವ ಕುರಿತಂತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಇಂದು ಸಂಜೆ ನಗರಕ್ಕೆ ಆಗಮಿಸಲಿದ್ದು , ಮಾತುಕತೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ