ಶಾಸ್ತ್ರೀಯ ಸ್ಥಾನ: ನ.27ರಂದು ವಿಚಾರಣೆ

ಶುಕ್ರವಾರ, 14 ನವೆಂಬರ್ 2008 (16:52 IST)
ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂತಿಮ ವಿಚಾರಣೆ ನ.27ರಂದು ನಡೆಯಲಿದೆ.

ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯನ್ನು ಪ್ರಶ್ನಿಸಿ, ತಮಿಳುನಾಡಿನ ಆರ್.ಗಾಂಧಿ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇತ್ತೀಚೆಗೆ ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಗೌರವ ನೀಡಿದ ಪ್ರತಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಇದೀಗ ಅರ್ಜಿಯ ಅಂತಿಮ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಗಂಗೂಲಿ ಹಾಗೂ ಇಬ್ರಾಹಿಂ ಖಲೀಪುಲ್ಲಾ ಅವರನ್ನೊಳಗೊಂಡ ನ್ಯಾಯಪೀಠ ನ.27ರಂದು ವಿಚಾರಣೆ ನಡೆಸಲಿದೆ.

ಕರ್ನಾಟಕದ ದೀಪಕ್ ತಿಮ್ಮಯ್ಯ ಎಂಬುವರು ಆರ್.ಗಾಂಧಿ ಎಂಬವರು ಶಾಸ್ತ್ರೀಯ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಮದ್ರಾಸ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ವೆಬ್ದುನಿಯಾವನ್ನು ಓದಿ