ಸಿಎಂ ಸಿದ್ದು ನಿವಾಸದಲ್ಲಿ ಉಪಚುನಾವಣೆಗೆ ರಣತಂತ್ರ

ಭಾನುವಾರ, 21 ಜುಲೈ 2013 (16:09 IST)
WD
WD
ಬೆಂಗಳೂರು: ಎರಡು ಲೋಕಸಭೆ ಕ್ಷೇತ್ರಗಳಾದ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಚುನಾವಣೆಗೆ ರಣತಂತ್ರ ರೂಪಿಸುವ ಸಲುವಾಗಿ ಚರ್ಚೆ ನಡೆಸಲಾಯಿತು.

ಈ ಚರ್ಚೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. ಉಪಚುನಾವಣೆಗೆ ಶೀಘ್ರದಲ್ಲೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವುದಾಗಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರಗಳಿಗೆ ಉಪಚುನಾವಣೆಗಳು ಆಗಸ್ಟ್ 21ರಂದು ನಡೆಯಲು ನಿಗದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಇದು ಸತ್ವಪರೀಕ್ಷೆಯಾಗಿ ಪರಿಣಮಿಸಿದೆ.

ಆದರೆ ತನ್ನಿಂದ ಜೆಡಿಎಸ್ ಕಸಿದುಕೊಂಡ ಸ್ಥಾನಗಳನ್ನು ಮರುಸಂಪಾದಿಸಲು ಕಾಂಗ್ರೆಸ್ ತುದಿಗಾಲಿನಲ್ಲಿ ನಿಂತಿದೆ. ಹೀಗಾಗಿ ಈ ಚುನಾವಣೆಯಲ್ಲಿ ಕಡುವೈರಿಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಏರ್ಪಡುವ ಸಂಭವವಿದೆ. ಏಕೆಂದರೆ ಜೆಡಿಎಸ್ ಕಾಂಗ್ರೆಸ್ ಭದ್ರಕೋಟೆಯೊಳಗೆ ನುಸುಳಿ ಅವೆರಡು ಸ್ಥಾನಗಳನ್ನು ಕಸಿದುಕೊಂಡಿತ್ತು. ಕಳೆದ ಲೋಕಸಭೆ ಚುನಾವಣೆಯಲ್ಲಿ ಅಂಬರೀಶ್ ಅವರನ್ನು ಸೋಲಿಸುವ ಮೂಲಕ ಜೆಡಿಎಸ್ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.

ವೆಬ್ದುನಿಯಾವನ್ನು ಓದಿ