ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಕುರ್ಚಿ ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯ ಸಮ್ಮುಖದಲ್ಲೇ ಅಗ್ರಹಿಸಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಪ್ರತಿಕ್ರಿಯಿಸಿ, ಈ ವಿಚಾರವನ್ನು ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.
ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಆಗುವುದು ಮೊದಲ ಬಾರಿ. ಸಿದ್ದರಾಮಯ್ಯ ಅವರಿಗೆ ಇಷ್ಟೊಂದು ಅವಮಾನವಾಗಿ ಸಿಎಂ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ.