ಸಿದ್ದು ಸರಕಾರದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿವೆ ದೌರ್ಜನ್ಯ ರಾಜ್ಯಪಾಲ

ಗುರುವಾರ, 12 ಡಿಸೆಂಬರ್ 2013 (16:11 IST)
PTI
ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಮಹಿಳೆಯರ ರಕ್ಷಣೆಗಾಗಿ ವಿಶೇಷ ಕಾನೂನು ಜಾರಿಗೆ ತರುವ ಅಗತ್ಯವಿದೆ. ಸರಕಾರ ದಕ್ಷ ಪೊಲೀಸ್ ಅಧಿಕಾರಿಗಳ ಬಗ್ಗೆ ನಿರ್ಲಕ್ಷವಹಿಸುತ್ತಿದೆ ಎಂದು ರಾಜ್ಯಪಾಲ ಎಚ್‌.ಆರ್. ಭಾರದ್ವಾಜ್ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮಹಿಳೆಯರ ರಕ್ಷಣೆಗಾಗಿ ಯಾವುದೇ ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದು ಕೂಡಲೇ ಅದನ್ನು ಜಾರಿ ಮಾಡಿ ಅವರ ಭಧ್ರತೆ ಹಾಗೂ ರಕ್ಷಣೆಗೆ ಹೆಚ್ಚಿನ ಒತ್ತು ನೀಡಿ ಎಂದು ಸರಕಾರಕ್ಕೆ ಸಲಹೆ ನೀಡಿದರು.

ವರದಕ್ಷಿಣೆ, ಕೌಟಂಬಿಕ ದೌರ್ಜನ್ಯ ಕಾಯ್ದೆ ಜಾರಿಗೆ ಬಂದಾಗ ಸ್ವಲ್ಪಮಟ್ಟಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಕಡಿಮೆಯಾಗಿದ್ದವು. ಈಗ ಮಹಿಳೆಯರ ಮೇಲೆ ಬೇರೆ ರೀತಿಯ ದೌರ್ಜನ್ಯಗಳಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲ. ಆದ್ದರಿಂದ ಕೆಲಸ ಮಾಡಲು ಹಿಂಜರಿಯುವಂತಹ ಪರಿಸ್ಥಿತಿ ಎದುರಾಗಿದೆ. ಮಹಿಳೆಯರ ರಕ್ಷಣೆ ಮತ್ತು ಭದ್ರತೆ ಪೊಲೀಸರ ಜವಾಬ್ದಾರಿಯಾಗಿದ್ದರಿಂದ ಅದನ್ನು ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ