ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ: ಸಿಬಿಐಗೆ ಗುಪ್ತಚರ ಇಲಾಖೆ ಸಾಥ್

ಮಂಗಳವಾರ, 1 ಏಪ್ರಿಲ್ 2014 (11:20 IST)
PR
PR
ಬೆಳ್ತಂಗಡಿ: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆರಂಭಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಅವರಿಗೆ ಸಾಥ್ ನೀಡಿದರು. ಕಳೆದ ರಾತ್ರಿ ಉಜಿರೆಯಲ್ಲಿರುವ ಪ್ರಜಾಪ್ರಭುತ್ವ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿ ಕೆಲವು ಮಾಹಿತಿಗಳನ್ನು ಸಂಗ್ರಹಿಸಲಾಯಿತು. ಬೆಳ್ತಂಗಡಿ ಸುತ್ತಮುತ್ತ 460ಕ್ಕೂ ಹೆಚ್ಚು ಅಸಹಜ ಸಾವು ಪ್ರಕರಣಗಳ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಕಳೆದ ವಾರದಿಂದ ತನಿಖೆ ಆರಂಭಿಸಿದ್ದಾರೆ.

ಮಹೇಶ್ ಶೆಟ್ಟಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆಪ್ರಕರಣದ ಬಗ್ಗೆ ಹೋರಾಟ ಕೈಗೊಂಡಿದ್ದು, ಬೆಳ್ತಂಗಡಿ ಸುತ್ತಮುತ್ತಲಿನ ಅಸಹಜ ಸಾವುಗಳ ಬಗ್ಗೆ ಕೂಡ ತನಿಖೆಗೆ ಒತ್ತಾಯಿಸಿದ್ದರು. ಸೌಜನ್ಯಳ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಐಬಿ ಅಧಿಕಾರಿಗಳು ನಿನ್ನೆಯಿಂದ ಭಾಗಿಯಾಗಿದ್ದಾರೆ. ಉಳಿದ 463 ಪ್ರಕರಣಗಳ ಬಗ್ಗೆ ಯಾವ ಕೇಸ್‌ಗಳಿವೆ, ಅದಕ್ಕೆ ಸಂಬಂಧಿಸಿದ ದಾಖಲೆಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಕಲೆ ಹಾಕಿದೆ.

ವೆಬ್ದುನಿಯಾವನ್ನು ಓದಿ