ಸ್ಥಳಿಯ ಸಂಸ್ಥೆ ಚುನಾವಣೆ ಜೆಡಿಎಸ್ ಭರ್ಜರಿ ಗೆಲುವು

ಭಾನುವಾರ, 30 ಸೆಪ್ಟಂಬರ್ 2007 (17:32 IST)
ಕರ್ನಾಟಕದಲ್ಲಿ ನಡೆದ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ನಿಚ್ಚಳವಾಗಿ ಮುನ್ನಡೆ ಸಾಧಿಸಿ ಬಹುತೇಕ ಸ್ಥಳಿಯ ಸಂಸ್ಥೆಗಳ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

4920 ವಾರ್ಡ್‌ಗಳ ಪೈಕಿ ಜೆಡಿಎಸ್ 1200 ವಾರ್ಡ್‌ಗಳಲ್ಲಿ ಜಯ ಸಾಧಿಸಿದೆ. ಮತದಾರರು ಬಿಜೆಪಿಗೆ ಸರಿಯಾದ ಬುದ್ದಿ ಕಲಿಸಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


ಪಕ್ಷವು ಜೆಡಿಎಸ್ ಪಕ್ಷವು ತನ್ನ ಸಾಂಪ್ರದಾಯಿಕ ಭದ್ರ ಕೋಟೆ ದಕ್ಷಿಣ ಕರ್ನಾಟಕದಲ್ಲಿ ಈ ಬಾರಿ ಕೂಡ ಗೆಲುವು ಸಾಧಿಸಿದ್ದು, ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಕಾಲಿಟ್ಟಿದೆ. ಕಾಂಗ್ರೆಸ್ 900 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿ ದ್ವಿತೀಯ ಸ್ಥಾನ ಪಡೆದಿದೆ.


ಇಲ್ಲಿಯವರೆಗೆ ಮೊದಲಿನ ಸ್ಥಾನದಲ್ಲಿದ್ದ ಭಾರತೀಯ ಜನತಾ ಪಕ್ಷ ಮೂರನೆ ಸ್ಥಾನಕ್ಕೆ ಇಳಿದಿದೆ. ಸ್ಥಳಿಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಅಧಿಕಾರ ಹಸ್ತಾಂತರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ