‘ಸಿಎಂ ಸಿದ್ದರಾಮಯ್ಯ ಸಿನಿಮಾ ನೋಡೋದನ್ನು ಬಿಟ್ಟು ಅಭಿವೃದ್ಧಿ ಮಾಡ್ಲಿ’

ಸೋಮವಾರ, 5 ಜೂನ್ 2017 (11:23 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಾರಕ್ಕೊಂದು ಬಾರಿ ಸಿನಿಮಾ ನೋಡುತ್ತಾ ಕಾಲಹರಣ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡುವತ್ತ ಗಮನಹರಿಸಲಿ ಎಂದು ಶಾಸಕ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ಧು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಗ್ರಾಮೀಣ ಭಾಗದ ಪ್ರದೇಶಗಳು ಇನ್ನೂ ಹಿಂದುಳಿದಿವೆ.

ಅವರ ತವರು ಗ್ರಾಮದಲ್ಲೇ ಜನ ಉದ್ಯೋಗವಿಲ್ಲದೆ ವಲಸೆ ಹೋಗುತ್ತಿದ್ದಾರೆ. ಆದರೆ ಸಿಎಂ ಉದ್ಯೋಗ ಸೃಷ್ಟಿಗಾಗಿ ಕೆಲಸ ಮಾಡುತ್ತಿಲ್ಲ. ಅದನ್ನೆಲ್ಲಾ ಬಿಟ್ಟು ವಾರಕ್ಕೊಮ್ಮೆ ಸಿನಿಮಾ ನೋಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ