‘ರಾಜ್ಯ ಸರ್ಕಾರದ ಅಧೀನದಲ್ಲಿ ಐಟಿ ಇದ್ದಿದ್ದರೆ ಡಿಕೆಶಿಗೆ ಕ್ಲೀನ್ ಚಿಟ್ ಸಿಗ್ತಿತ್ತು’

ಭಾನುವಾರ, 6 ಆಗಸ್ಟ್ 2017 (12:52 IST)
ಬೆಂಗಳೂರು: ಡಿಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಸುಮ್ಮನಿದ್ದ ಬಿಜೆಪಿ ನಾಯಕರು ಇದೀಗ ವಾಗ್ದಾಳಿ ನಡೆಸಿದ್ದಾರೆ.

 
ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಸರ್ಕಾರದಲ್ಲಿರುವವರೆಲ್ಲರೂ ಭ್ರಷ್ಟರೇ.

ಡಿಕೆ ಶಿವಕುಮಾರ್ ಮನೆಯಲ್ಲಿ 300 ಕೋಟಿ ರೂ. ಪತ್ತೆಯಾಗಿದೆ ಎಂದು ವರದಿಯಾಗಿದೆ. ಒಂದು ವೇಳೆ ಐಟಿ ಇಲಾಖೆ ರಾಜ್ಯ ಸರ್ಕಾರದ ಅಧೀನದಲ್ಲಿದ್ದಿದ್ದರೆ, ಪ್ರಕರಣ ಮುಚ್ಚಿ ಹೋಗ್ತಾ ಇತ್ತು. ಡಿಕೆಶಿಗೆ ಸರ್ಕಾರ ಕ್ಲೀನ್ ಚಿಟ್ ಕೊಡ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ.. ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ