ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2ಕೋಟಿ ವಂಚನೆ ಆರೋಪದ ಮೇರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ದೂರಿನ ಮೇರೆಗೆ ಬಸವೇಶ್ವನಗರ ಠಾಣೆ ಪೊಲೀಸರು ಆರೋಪಿಗಳನ್ನು ಇಂದು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಟಿಕೆಟ್ ಕೊಡಿಸುವುದಾಗಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದಗ್ ಫೂಲ್ ಸಿಂಗ್ ಚವ್ಗಾಭ್ ಅವರಿಂದ ₹2ಕೋಟಿ ಸುಲಿಗೆ ನಡೆಸಿದ್ದ ಆರೋಪದಲ್ಲಿ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೇ ಗೋಪಾಲ ಜೋಶಿ ನಾಪತ್ತೆಯಾಗಿದ್ದರು. ಇದೀಗ ಇವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ.