ರೂಪಾಗೆ 1 ಕೋಟಿ ಮಾನನಷ್ಟ ಮೊಕದ್ದಮೆ ಎಚ್ಚರಿಕೆ!
IPS ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಸಮರ ಜೊರಾಗಿದ್ದು, IAS ಅಧಿಕಾರಿ ರೋಹಿಣಿ ಸಿಂಧೂರಿಯವರು ಕೂಡ ಕಾನೂನು ಹೋರಾಟಕ್ಕಿಳಿದಿದ್ದಾರೆ. 21 ಅಂಶಗಳನ್ನು ಮುಂದಿಟ್ಟು ಲೀಗಲ್ ನೋಟಿಸ್ ಜಾರಿ ಮಾಡಲಾಗಿದ್ದು, ಅವರ ಮೇಲೆ 1 ಕೋಟಿ ಮಾನನಷ್ಟ ಮೊಕದ್ದಮೆ ಹಾಕೋದಾಗಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ರೂಪಾ ವಿರುದ್ಧ ನಿರ್ಬಂಧಾಜ್ಞೆ ಅರ್ಜಿ ಸಲ್ಲಿಸಿದ್ದು, ಅರ್ಜಿದಾರರ ಪರ ವಕೀಲರ ವಾದ ಆಲಿಸಿರುವ ಕೋರ್ಟ್ ಇಂದು ಆದೇಶ ನೀಡಲಿದೆ.ಇನ್ನು, ಇಂದು ಐಜಿಪಿ ಡಿ. ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಂಧೂರಿ ಪರ ವಕೀಲರು, ಡಿ ರೂಪಾ ಅವರು ಸೈಬರ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಇದರಿಂದ ಅವರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ನಿರ್ಬಂಧಕಾಜ್ಞೆಗೆ ನೀಡಿ, ರೂಪ ಅಧಿಕಾರ ದುರುಪಯೋಗವಾಗಿದೆ ಎಂದು ಕೋರ್ಟ್ ಅಲ್ಲಿ ವಾದ ಮಂಡಿಸಿದ್ದರು. ಅಲ್ಲದೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ಅಷ್ಟದರೂ ಚೌಕಟ್ಟು ಮೀರಿ ಮಾತನಾಡುತ್ತಾ ಇದ್ದಾರೆ ಎಂದು ಮಧ್ಯಂತರ ಆದೇಶಕ್ಕೆ ಮನವಿ ಮಾಡಿದ್ದರು.