ದೀಪಾವಳಿ ಹಬ್ಬದ ಪ್ರಯುಕ್ತ 1 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ

ಗುರುವಾರ, 4 ನವೆಂಬರ್ 2021 (21:52 IST)
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 1 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮವು ಬೆಂಗಳೂರಿನಿಂದ ರಾಜ್ಯದೊಳಗಿನ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ಬಿಡಲಾಗಿದೆ.
ಅಂತಾರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೆ  ನ. 7 ರವರೆಗೆ 1 ಸಾವಿರ ಕ್ಕೂ ಹೆಚ್ಚುವರಿ ವಿಶೇಷ ವಾಹನಗಳ ಕಾರ್ಯಾಚರಣೆ ನಡೆಯಲಿದೆ.
ಹೆಚ್ಚುವರಿ ವಿಶೇಷ ಸಾರಿಗೆಗಳ ಪ್ರಯಾಣ ದರಗಳಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಕರಾರಸಾ ನಿಗಮದ ವೆಬ್‌ಸೈಟ್ www.ksrtc.karnataka.gov.in one ಕರ್ನಾಟಕ ಮತ್ತು ವಿವಿಧ ರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮುಖೇನ ಈ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ