ಬರಪೀಡಿತ ಜಿಲ್ಲೆಗಳಿಗೆ ಹಣದ ಬದಲು 10 ಕೆ.ಜಿ.ಅಕ್ಕಿ- ಸಚಿವ ಮುನಿಯಪ್ಪ

ಸೋಮವಾರ, 2 ಅಕ್ಟೋಬರ್ 2023 (15:48 IST)
ಅಕ್ಟೋಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ನೀಡಲಾಗುವುದು. ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ಸಂಬಂಧಿಸಿದ ಮಾತುಕತೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ 10 ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಪುನರುಚ್ಛಾರ ಮಾಡಿದ್ದಾರೆ. ಅಕ್ಟೋಬರ್‌ ತಿಂಗಳಲ್ಲಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಸಚಿವರು ಹೇಳಿದ್ದರು. 

ವೆಬ್ದುನಿಯಾವನ್ನು ಓದಿ