ಸಾಲ ಮನ್ನಾ ಬೆನ್ನಲ್ಲೆ, 10 ಸಾವಿರ ಪೌರ ಕಾರ್ಮಿಕರ ನೇಮಕಾತಿ:ಸಿಎಂ ಘೋಷಣೆ

ಶುಕ್ರವಾರ, 23 ಜೂನ್ 2017 (15:37 IST)
ಪೌರ ಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಿ ಮೊದಲ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ಮೂರು ತಿಂಗಳಲ್ಲಿ ಮೊದಲ ಹಂತವಾಗಿ 10 ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುವುದು ಉಳಿದ 1 ಸಾವಿರ ಪೌರ ಕಾರ್ಮಿಕರ ನೇಮಕವನ್ನು ನಂತರ ಖಾಯಂಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
ಪೌರಕಾರ್ಮಿಕರಿಗೆ ಮಧ್ಯಾಹ್ನದ ಊಟದ ಜತೆಗೆ ಒಂದು ದಿನದ ರಜೆ ನೀಡಲಾಗುವುದು. ಪೌರ ಕಾರ್ಮಿಕರು ದುಷ್ಚಟಗಳಿಂದ ದೂರವಿರಬೇಕು. ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಬಾರದು ಎಂದು ಸಲಹೆ ನೀಡಿದ್ದಾರೆ.
 
ಪೌರ ಕಾರ್ಮಿಕರ ಆರೋಗ್ಯ ಸೇರಿದಂತೆ ಇತರ ಸರಕಾರಿ ಉದ್ಯೋಗಿಗಳಿಗೆ ದೊರೆಯುವಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಮುಂದಿನ ಸಚಿವ ಸಂಪುಟದಲ್ಲಿ ಆದೇಶ ಹೊರಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ