ಒತ್ತಾಯದ ಮತಾಂತರಕ್ಕೆ 10 ವರ್ಷ ಜೈಲು...?

ಭಾನುವಾರ, 12 ಡಿಸೆಂಬರ್ 2021 (18:58 IST)
ಬೆಂಗಳೂರು: ಇತ್ತಿಚ್ಚೆಗೆ ಮತಾಂತರದ ಸುದ್ದಿಗಳು ಹೆಚ್ಚುತ್ತಿವೆ. ಮಾತ್ರವಲ್ಲದೆ ವಿವಿಧ ಆಸೆ ಆಮಿಷ ಸೇರಿದಂತೆ ಹಲವು ಕಾರಣಗಳಿಂದ ಜನರನ್ನು ಒತ್ತಾಯಪೂರ್ವಕವಾಗಿ ಮತಾಂತರ ಮಾಡುತ್ತಿರುವ ಬಗ್ಗೆ ವರದಿಯಾಗಿದೆ.
ಈ ವರದಿಗಳ ಬೆನ್ನಲ್ಲೆ ಇದೀಗ ಸರ್ಕಾರ ಸೂಕ್ತ ಕ್ರಮವೊಂದನ್ನು ಕೈಗೊಳ್ಳಲು ಮುಂದಾಗಿದೆ. ಹೌದು ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ ಕನಿಷ್ಠ1ರಿಂದ ಗರಿಷ್ಠ 10 ವರ್ಷಗಳ ಶಿಕ್ಷೆ ಮತ್ತು ದಂಡ ಸೇರಿದಂತೆ ಹಲವು ಕಠಿಣ ಕ್ರಮಗಳಿರುವ ಮತಾಂತರ ನಿಷೇದ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಕರಡು ಮಸೂದೆ ಸಿದ್ಧಪಡಿಸಿದೆ.
ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ಅಧ್ಯಯನ ಮಾಡಿ, ರಾಜ್ಯದ ಪರಿಸ್ಥಿತಿಗೆ ಅನುಗುಣವಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದ್ದು, ಕಾನೂನು ತಜ್ಞರು ಮಸೂದೆ ಮಂಡನೆಗೆ ಮುನ್ನ ಎಲ್ಲ ಆಯಾಮಗಳಿಂದ ಪರಿಶೀಲಿಸುತ್ತಿದ್ದಾರೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವರಿಗೆ ಜೈಲುಪಾಲಾಗುವ ದಿನಗಳು ಸಮೀಪಿಸುತ್ತಿವೆ ಎಂದರೆ ತಪ್ಪಾಗಲಾರದು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ