ಈ ಜಿಲ್ಲೆಯಲ್ಲಿ 100 ಕಂಟೈನ್ಮೆಂಟ್ ಝೋನ್

ಭಾನುವಾರ, 28 ಜೂನ್ 2020 (17:48 IST)
ಹೆಚ್ಚುತ್ತಿರುವ ಕೊರೊನಾ ಕೇಸ್ ಗಳಿಂದಾಗಿ ರಾಜ್ಯದ ಈ ಜಿಲ್ಲೆಯಲ್ಲಿ 100 ಕಂಟೈನ್ಮೆಂಟ್ ಝೋನ್ ಗಳಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಕಂಟೈನ್ಮೆಂಟ್ ಪ್ರದೇಶದ ಜನರು ಸರಕಾರದ ಮಾಗ೯ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸ ಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಜತೆ ಸಹಕರಿಸ ಬೇಕು ಎಂದಿದ್ದಾರೆ.

ಜಿಲ್ಲೆಗೆ ಈವರೆಗೆ ವಿದೇಶದಿಂದ ಸುಮಾರು 3500 ಮಂದಿ ಆಗಮಿಸಿದ್ದು, ಅವರಲ್ಲಿ 300 ಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಅದೇ ರೀತಿ ಬೇರೆ ರಾಜ್ಯದಿಂದ ಬಂದವರಲ್ಲಿ ಕೂಡಾ ಸೋಂಕು ಪತ್ತೆಯಾಗಿರುವುದು ಸೋಂಕಿತ ಪ್ರಕರಣಗಳು ಏರಿಕೆಯಾಗಲು ಕಾರಣವಾಗಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ