ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕನ್ನಡ ಹಾಗೂ ಆಂಗ್ಲ ಮಾಧ್ಯಮದ 1000 ಶಾಲೆಗಳನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿದೆ.
ಸರಕಾರಿ ಶಾಲೆಗಳು ಉಳಿಯಬೇಕಿವೆ. ಗುಣಮಟ್ಟವನ್ನು ಅಭಿವೃದ್ಧಿಪಡಿಸಿ ಜಾಗತಿಕ ನಿರೀಕ್ಷೆಗೆ ತಕ್ಕಂತೆ ಬೆಳೆಸುವ ಕ್ರಮವಾಗಿ ಸರಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಎರಡರಲ್ಲೂ ಬೋಧನೆ ಮಾಡುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಉಭಯ ಮಾಧ್ಯಮಗಳಲ್ಲಿ ಪಠ್ಯಗಳು ಇರಲಿವೆ. ಎರಡೂ ಮಾಧ್ಯಮಗಳಲ್ಲಿ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದೆ ಎಂದಿದ್ದಾರೆ.