ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷ ಯೋಜನೆ ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು.