ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ಊಟ ಸೇವಿಸಿದ 103 ಮಕ್ಕಳು ಅಸ್ವಸ್ಥ

ಸೋಮವಾರ, 31 ಡಿಸೆಂಬರ್ 2018 (14:16 IST)
ಬೆಂಗಳೂರು : ಸಿದ್ಧಾಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ಭಾನುವಾರ ರಾತ್ರಿ ಊಟ ಸೇವಿಸಿದ 103 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹಾಗೂ ಇಂಟರ್ ಗ್ರೇಟೆಂಡ್ ಚೈಲ್ಡ್ ಪ್ರೊಟೆಕ್ಟ್ ಸ್ಕೀಂ‌ ನಲ್ಲಿ ನಡೆಯುತ್ತಿರುವ ಈ ಬಾಲಮಂದಿರದಲ್ಲಿ ನಿನ್ನೆ ರಾತ್ರಿ ಮಕ್ಕಳು ಎಂದಿನಂತೆ ಊಟ ಮಾಡಿದ್ದಾರೆ. ಬಳಿಕ ಫುಡ್​​ ಪಾಯಿಸನ್​ ನಿಂದ 103ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ವಾಂತಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 103 ವಿದ್ಯಾರ್ಥಿಗಳನ್ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆ‌ಗೆ ದಾಖಲಿಸಲಾಗಿದೆ. ಅದ್ರಲ್ಲಿ ಮೂರು ಮಕ್ಕಳು ತೀವ್ರವಾಗಿ ಅಸ್ವಸ್ಥತರಾಗಿದ್ದು, ಇನ್ನೂ 40 ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.


ಈ ಘಟನೆ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಹಾಗೆ ಫುಡ್ ಸ್ಯಾಂಪಲ್ಸ್ ಈಗಾಗ್ಲೇ ಲ್ಯಾಬ್ ಗೆ ಕಳಿಸಲಾಗಿದ್ದು, ತನಿಖೆ ನಂತರ ತಪ್ಪಿತಸ್ಥರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ