108 ಆರೋಗ್ಯ ಸೇವೆಗೆ ಹೊಸ ರೂಪ : ದಿನೇಶ್ ಗುಂಡೂರಾವ್

ಸೋಮವಾರ, 19 ಜೂನ್ 2023 (08:54 IST)
ಬೆಂಗಳೂರು : 108 ಆರೋಗ್ಯ ಸೇವೆಯನ್ನ ಬರುವ ಮೂರು ತಿಂಗಳೊಳಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ 108 ಸೇವೆ ಕುರಿತಂತೆ ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, 108 ಸಮರ್ಪಕವಾಗಿ ಜನರಿಗೆ ದೊರಕುವಂತೆ ನಿಟ್ಟಿನಲ್ಲಿ ಇರುವ ಸಮಸ್ಯೆಗಳನ್ನ ಬಗೆಹರಿಸುವ ಕುರಿತಂತೆ ಚರ್ಚೆ ನಡೆಸಿದರು.

ಸಭೆಗೂ ಮುನ್ನ ಇ.ಎಂ.ಆರ್.ಐ. ಗ್ರೀನ್ ಹೆಲ್ತ್ ಸರ್ವೀಸ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ವೀಸ್ ಸೆಂಟರ್ ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಚರ್ಚಿಸಿ ಸಮಸ್ಯೆಗಳನ್ನ ಆಲೀಸಿದರು. ಕಾಲ್ ಸೆಂಟರ್ ನ ತಂತ್ರಜ್ಞಾನ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದ ಸಚಿವರು, ತಂತ್ರಜ್ಞಾನದಲ್ಲಿ ಬದಲಾವಣೆ ತರುವಂತೆ ಸೂಚಿಸಿದರು.

108 ಸೇವೆ ಪಡೆಯಲು ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಏಕೆ ಸಿಗುತ್ತಿಲ್ಲ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಗುಂಡೂರಾವ್, ಅತಿ ಶೀಘ್ರದಲ್ಲಿ ಸಮಸ್ಯೆಗಳನ್ನ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ