ಬ್ಯಾಂಕಿನಲ್ಲಿದ್ದ 12 ಕೆ.ಜಿ ಚಿನ್ನ ದರೋಡೆ

ಮಂಗಳವಾರ, 4 ಸೆಪ್ಟಂಬರ್ 2018 (17:39 IST)
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬ್ಯಾಂಕ್ ದರೋಡೆ ನಡೆದಿದೆ.

ಎಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿಯ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಕಳ್ಳತನ ನಡೆದಿದೆ. ಬ್ಯಾಂಕಿನಲ್ಲಿ ಅಡಮಾನವಾಗಿರಿಸಿಕೊಂಡಿದ್ದ 12 ಕೆಜಿ ಚಿನ್ನಾಭರಣ ಹಾಗೂ 5 ಲಕ್ಷಕ್ಕೂ ಅಧಿಕ ನಗರದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

3 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಹೆಚ್.ಡಿ.ಕೋಟೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ