ವಿವೇಕಾನಂದರ ಚಿಕ್ಯಾಗೊ ಉಪನ್ಯಾಸಕ್ಕೆ 125 ವರ್ಷ: ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?

ಶುಕ್ರವಾರ, 5 ಅಕ್ಟೋಬರ್ 2018 (17:41 IST)
ಸ್ವಾಮಿ ವಿವೇಕಾನಂದರು ಚಿಕ್ಯಾಗೊ ಉಪನ್ಯಾಸಕ್ಕೆ 125 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿಭಿನ್ನವಾಗಿ ಯಾತ್ರೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೃಹತ್ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಎಸ್ ಎಮ್ ಎಸ್ ಕಾಲೇಜಿನಿಂದ ಆರಂಭವಾದ ತಿರಂಗಾ ಯಾತ್ರೆ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಗಚ್ಚಿನ ಮಠದ ಆವರಣದಲ್ಲಿ  ಮುಕ್ತಾಯವಾಯಿತು.

ಈ ವೇಳೆ 250 ಮೀಟರ್.ಉದ್ದ ಹಾಗೂ 8 ಅಡಿ ಅಗಲದ ತ್ರಿವರ್ಣ ಧ್ವಜದ ಮೆರವಣಿಗೆ ನಡೆಸಲಾಯಿತು. ಐದನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ