ಅಕ್ರಮವಾಗಿ ಭಾರತದೊಳಗೆ ನುಸಳಿ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ 13 ಮಂದಿ

ಮಂಗಳವಾರ, 7 ಸೆಪ್ಟಂಬರ್ 2021 (20:15 IST)
ಅಕ್ರಮವಾಗಿ ಭಾರತದೊಳಗೆ ನುಸಳಿ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ 13 ಮಂದಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ನಗರದ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. 
ಬಾಂಗ್ಲಾ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆಧಾರ್ ಕಾರ್ಡ್ ಸೇರಿ ಅಕ್ರಮವಾಗಿ ನಾನಾ ದಾಖಲಾತಿ ಸೃಷ್ಟಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ ರಫೀಕ್, ಶೋಬಜ್, ರಿದಾಯ್ ಬಾಬು, ರಕೀಬುಲ್ ಸಾಗರ್, ದಾಲೀಮ್ ಸೇರಿ 13 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ. 
ಆರೋಪಿಗಳು ಭಾರತದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬಾಂಗ್ಲಾ ಮೂಲದ ಯುವತಿಯರನ್ನು ತಮ್ಮ ಸಹಚರರ ಮೂಲಕ ನಗರಕ್ಕೆ ಕರೆಸಿಕೊಳ್ಳುತ್ತಿದ್ದರು. ಬಳಿಕ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು. ಇದೇ ರೀತಿ ಮೇ 27ರಂದು ರಾಮಮೂರ್ತಿನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಕನಕನಗರದ ಬಾಡಿಗೆ ಮನೆಯೊಂದಕ್ಕೆ ಬಾಂಗ್ಲಾ ಯುವತಿಯನ್ನು ಕರೆಸಿ ಆಕೆಯ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿದ್ದರು. ಈ ಸಂಬಂಧ ರಾಮಮೂರ್ತಿನಗರ ಪೆÇಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಬಯಲಾಗಿತ್ತು. 
ಈ ವೇಳೆ ಆರೋಪಿಗಳ ವಶದಲ್ಲಿದ್ದ 7 ಬಾಂಗ್ಲಾ ಮೂಲದ ಯುವತಿಯರನ್ನು ಪೆÇಲೀಸರು ರಕ್ಷಿಸಿದ್ದರು. ಅಲ್ಲದೆ, ಕಾನೂನುಬಾಹಿರವಾಗಿ ಭಾರತಕ್ಕೆ ನುಸುಳಿ ವಾಮಮಾರ್ಗದಲ್ಲಿ ಆಧಾರ್‍ಕಾರ್ಡ್, ಪಾನ್? ಕಾರ್ಡ್ ಮಾಡಿಸಿರುವುದು ಎನ್‍ಐಎ ತನಿಖೆ ವೇಳೆ ಗೊತ್ತಾಗಿತ್ತು. ಹೀಗಾಗಿ, ಕಳೆದ ಜೂನ್‍ನಲ್ಲಿ ರಾಮಮೂರ್ತಿನಗರ ಪೆÇಲೀಸರಿಂದ ಮಾಹಿತಿ ಪಡೆದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಪ್ರತ್ಯೇಕವಾಗಿ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳನ್ನು ಬಾಡಿ ವಾರೆಂಟ್ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿತ್ತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ