ಏಪ್ರಿಲ್ 14 ತನಕ 144 ನಿಷೇಧಾಜ್ಞೆ ವಿಸ್ತರಣೆ
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.
ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಏಪ್ರಿಲ್ 14ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.
ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ. ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.