ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಮೇ 31ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮೇ 31 ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.
ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಮೇ 31ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.
ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಗುಂಪು-ಗುಂಪಾಗಿ ಚಲಿಸುವುದು, ಅನಾವಶ್ಯಕವಾಗಿ ಹಾಗೂ ಕಾರಣರಹಿತವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.