ಗಣಿನಾಡಲ್ಲಿ ಕೇಂದ್ರ ಸಚಿವ, ಸಿಎಂ ಯಡಿಯೂರಪ್ಪ ಮಾಡ್ತಿರೋದೇನು?
ಪ್ರಧಾನ ಮಂತ್ರಿಗಳ ಆರೋಗ್ಯ ಸುರಕ್ಷಾ ಯೋಜನೆಯಡಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಬಳ್ಳಾರಿಯಲ್ಲಿ ನಿರ್ಮಿಸಿರುವ 210 ಹಾಸಿಗೆಗಳ ಆಸ್ಪತ್ರೆಗೆ ಚಾಲನೆ ನೀಡಲಾಗುತ್ತಿದೆ.
ಕೇಂದ್ರ ಆರೋಗ್ಯ ಖಾತೆಯ ಕೇಂದ್ರ ರಾಜ್ಯ ಸಚಿವ ಅಶ್ವೀನಿಕುಮಾರ್ ಚೌಬೆ, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಾಥ್ ನೀಡಲಿದ್ದಾರೆ.
ಬಳ್ಳಾರಿಯ ಟ್ರಾಮಾಕೇರ್ ಕೇಂದ್ರದ ಬಳಿ ನಡೆಯಲಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಉಪಸ್ಥಿತರಿರಲಿದ್ದಾರೆ.