ಸರ್ಕಾರಿ ನೌಕರರಿಗೆ 17% ಮಧ್ಯಂತರ ಪರಿಹಾರ

ಬುಧವಾರ, 1 ಮಾರ್ಚ್ 2023 (14:38 IST)
ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ಮಧ್ಯಂತರ ಪರಿಹಾರ ಕೊಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ. ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು. ಎನ್​​​​ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದು ಮಾಡುವ ಬೇಡಿಕೆ ಪರಾಮರ್ಶೆ ಮಾಡ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸ್ತೇವೆ ಎಂದರು. ಒಟ್ಟಿನಲ್ಲಿ 7ನೇ ವೇತನ ಆಯೋಗದಿಂದ ಸರ್ಕಾರ ಇನ್ನೂ ವರದಿ ಪಡೆದಿಲ್ಲ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಭರವಸೆ ಕೊಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ