ಪ್ರಿಯಕರನ ಸಮ್ಮುಖದಲ್ಲಿಯೇ ಪ್ರಿಯತಮೆಯ ಮೇಲೆ ಗ್ಯಾಂಗ್‌ರೇಪ್

ಮಂಗಳವಾರ, 21 ಫೆಬ್ರವರಿ 2017 (16:34 IST)
ರಾಜ್ಯದಲ್ಲಿ ಕಾಮುಕಾರ ಹಾವಳಿಗೆ ಮಿತಿಯೇ ಇಲ್ಲದಂತಾಗಿದೆ. ಪ್ರತಿನಿತ್ಯ ಒಂದಿಲ್ಲೊಂದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಪ್ರಿಯಕರನ ಸಮ್ಮುಖದಲ್ಲಿಯೇ ಪ್ರಿಯತಮೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ.
 
ಪ್ರೇಮಿಗಳು ಅರಣ್ಯ ಪ್ರದೇಶದಲ್ಲಿ ಸುತ್ತಾಡುತ್ತಿರುವಾಗ ಕಾಮುಕರು ಪ್ರೇಮಿಯನ್ನು ಬೆದರಿಸಿ ಆತನ ಮುಂದೆಯೇ ಯುವತಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ.  
 
ಫೆಬ್ರವರಿ 15 ರಂದು ನಗರದ ಅರಣ್ಯ ಪ್ರದೇಶದಲ್ಲಿ ನಡೆದಿದ್ದರೂ ಗ್ಯಾಂಗ್ ರೇಪ್ ಎಸಗಿದ ಘಟನೆ ನಡೆದಿದ್ದರೂ ತಡವಾಗಿ ಬೆಳಕಿಗೆ ಬಂದಿದೆ.
 
17 ವರ್ಷದ ಹದಿ ಹರೆಯದ ಯುವತಿಯ ಮೇಲೆ ಐವರು ಆರೋಪಿಗಳು ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ. ಒಂದು ವೇಳೆ, ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.  
 
ಆರೋಪಿಗಳ ವಿರುದ್ಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಗ್ಯಾಂಗ್‌ರೇಪ್‌ಗೊಳಗಾದ ಯುವತಿಯನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಗ್ಯಾಂಗ್‌ರೇಪ್ ಎಸಗಿರುವುದು ಖಚಿತವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ