ಹುಣಸೂರಿನ ಚೆಕ್ ಪೋಸ್ಟ್ ಬಳಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ2 ಕೋಟಿ ಹಣ ಜಪ್ತಿ

ಬುಧವಾರ, 27 ನವೆಂಬರ್ 2019 (10:31 IST)
ಮೈಸೂರು : ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ ಘಟನೆ ಹುಣಸೂರು ಮನುಗನಹ‍ಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.



ಬೊಲೆರೋ ವಾಹವದಲ್ಲಿ 3 ಚೀಲಗಳಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ಅದರ ಜೊತೆಗೆ ಎಂಡಿಸಿಸಿ ಬ್ಯಾಂಕಿನ ಇಬ್ಬರು ನೌಕರರು ಪ್ರಯಾಣ ಮಾಡುತ್ತಿದ್ದು, ಪಿರಿಯಾಪಟ್ಟಣ ಬ್ಯಾಂಕಿಗೆ ಇದನ್ನು ಸಾಗಿಸುತ್ತಿರುವುದಾಗಿ ಅವರು ಹೇಳಿದ್ದಾರೆ.


ಈ ಸಂಬಂಧ ಎಂಡಿಸಿಸಿ ಬ್ಯಾಂಕಿನ ಇಬ್ಬರು ನೌಕರರಿಗೆ ಹಣಕ್ಕೆ ಸೂಕ್ತ ದಾಖಲೆ ಒದಗಿಸುವಂತೆ ಚುನಾವಣಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ