2 ತಿಂಗಳು ವಾಡಿಕೆಗಿಂತ ಕಡಿಮೆ ಮಳೆ
ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ ಮತ್ತು ಸಪ್ಟೆಂಬರ್‌ನಲ್ಲಿ ವಾಡಿಕೆ ಪ್ರಮಾಣದ ಅರ್ಧದಷ್ಟು ಕಡಿಮೆ ಮಳೆ ಆಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ರೈತರನ್ನು ಆತಂಕಕ್ಕೀಡು ಮಾಡಿದೆ. ಕೇಂದ್ರ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಆಗಸ್ಟ್ ಮತ್ತು ಸಪ್ಟೆಂಬರ್ ತಿಂಗಳ ಮುನ್ಸೂಚನೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.40ರಿಂದ 50ರಷ್ಟುಮಳೆ ಕೊರತೆ ಉಂಟಾಗಲಿದೆ ಎಂದು ತಿಳಿಸಿದೆ.