ಎರಡೂ ಡೋಸ್ ಲಸಿಕೆ ಪಡೆಯದವರಿಗೆ ಸಿನಿಮಾ ಮಂದಿರ, ಮೆಟ್ರೋ, ಮಾಲ್, ಉದ್ಯಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡದಿರುವ ಕುರಿತು ಚಿಂತನೆ ನಡೆಸಿದೆ.ಸಭೆಯಲ್ಲಿ ತಜ್ಞರು ಕೆಲ ಮಹತ್ವದ ಸಲಹೆಗಳನ್ನ ನೀಡಿದ್ದಾರೆ. ಆ ಎಲ್ಲಾ ಸಲಹೆಗಳನ್ನ ಜಾರಿಗೆ ತರಲು ವಿಶೇಷ ಆಯುಕ್ತರಿಗೆ ಬಿಬಿಎಂಪಿ ಆಯುಕ್ತ ಗುಪ್ತಾ ಸೂಚನೆ ನೀಡಿದ್ದಾರೆ.
ರಾಜ್ಯದ ಕ್ಲಸ್ಟ್ರರ್ ಮಟ್ಟದಲ್ಲಿ ಕೊರೊನ?ಆ ಸೋಂಕು ಪತ್ತೆಯಾದ್ರೆ ಸ್ಯಾಂಪಲ್ಸ್ನ್ನ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್‌ಗೆ ಸ್ಯಾಂಪಲ್ಸ್ ಕಳುಹಿಸಬೇಕು. ಅದು ಕೂಡ INSACOG ಪ್ರಮಾಣಿತ ಲ್ಯಾಬ್ಗಳಿಗೆ ಕಡ್ಡಾಯವಾಗಿ ಸ್ಯಾಂಪಲ್ಸ್ ಕಳುಹಿಸಬೇಕು. ಅಂದ್ರೆ, ಜಿಲ್ಲಾ ಕೇಂದ್ರಗಳಲ್ಲಿ ಗುರುತಿಸಿರುವ ಲ್ಯಾಬ್ಗಳಿಗೆ ಕಳುಹಿಸಬೇಕು. ಆದ್ರೆ, ಯಾವುದೇ ಕಾರಣಕ್ಕೂ ಖಾಸಗಿ ಪ್ರಯೋಗಾಲಯಗಳಿಗೆ ಸ್ಯಾಂಪಲ್ಸ್ ಕಳಿಸುವಂತಿಲ್ಲ.