ಗಣೇಶೋತ್ಸವ ಪ್ರಯುಕ್ತ 200 ವಿಶೇಷ ರೈಲು ಸೇವೆ

ಸೋಮವಾರ, 30 ಆಗಸ್ಟ್ 2021 (19:47 IST)
ಗಣೇಶೋತ್ಸವಕ್ಕೆ ಊರಿಗೆ ತೆರಳುತ್ತಿರುವ ರೈಲ್ವೆ ಪ್ರಯಾಣಿಕರಿಗಾಗಿ ಭಾರತೀಯ ರೈಲ್ವೆ ಇಲಾಖೆ, 200 ಹೊಸ ವಿಶೇಷ ರೈಲುಗಳ ಸಂಚಾರವನ್ನು ಆರಂಭಿಸುತ್ತಿದೆ.
ರೈಲ್ವೆ ಪ್ರಯಾಣಿಕರಿಗೆ ಗಣೇಶ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಭಾರತೀಯ ರೈಲ್ವೆ ಇಲಾಖೆಯು ಮಾಹಿತಿ ನೀಡಿದ್ದು, ಭಾರತೀಯ ರೈಲ್ವೆಯ ಕೇಂದ್ರ ರೈಲ್ವೆ (ಸಿಆರ್) ಮತ್ತು ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಪ್ರಯತ್ನದಲ್ಲಿ 200ಕ್ಕೂ ಹೆಚ್ಚು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ