23 ಲಕ್ಷ ಭಾರತೀಯ ವಾಟ್ಸ್ಆ್ಯಪ್ ಖಾತೆ ನಿರ್ಬಂಧ

ಭಾನುವಾರ, 2 ಅಕ್ಟೋಬರ್ 2022 (19:57 IST)
ಜುಲೈನಲ್ಲಿ 23 ಲಕ್ಷ ಭಾರತೀಯ ಖಾತೆಗಳನ್ನು ವಾಟ್ಸ್ಆ್ಯಪ್ ನಿಷೇಧಿಸಿದೆ. ಆಗಸ್ಟ್ 1,2022 ಮತ್ತು ಆಗಸ್ಟ್ 31ರ ನಡುವೆ 2 ಕೋಟಿ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಬಳಕೆದಾರರಿಂದ ಯಾವುದೇ ವರದಿಗಳು ಬರುವ ಮೊದಲು ಈ 1 ಕೋಟಿ ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಮಾಸಿಕ ವರದಿಯಲ್ಲಿ ತಿಳಿಸಿದೆ. ವಾಟ್ಸ್ಆ್ಯಪ್ ಆಗಸ್ಟ್‌ನಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಮಾಡುವ ಮೊದಲು ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್‌ಫಾರ್ಮ್ ತಿಳಿಸಿದೆ. ಮೇ ತಿಂಗಳಿನಲ್ಲಿ 1.9 ಮಿಲಿಯನ್ ಅಂತಹ ಖಾತೆಗಳನ್ನು ವಾಟ್ಸ್ಆ್ಯಪ್ ನಿಷೇಧಿಸಿತ್ತು. ಏಪ್ರಿಲ್‌ನಲ್ಲಿ 1.6 ಮಿಲಿಯನ್ ಮತ್ತು ಮಾರ್ಚ್‌ನಲ್ಲಿ 1.8 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿತ್ತು. ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳು, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಪ್ರತಿ ತಿಂಗಳು ಅನುಸರಣೆ ವರದಿಗಳನ್ನು ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸ್ವೀಕರಿಸಿದ ದೂರುಗಳ ವಿವರಗಳು ಮತ್ತು ತೆಗೆದುಕೊಂಡ ಕ್ರಮಗಳನ್ನು ಉಲ್ಲೇಖಿಸಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ