ನಗರಪ್ರದೇಶದಲ್ಲಿ 24 ಗಂಟೆ, ಗ್ರಾಮೀಣದಲ್ಲಿ 18 ಗಂಟೆ ವಿದ್ಯುತ್: ಡಿಕೆಶಿ

ಮಂಗಳವಾರ, 22 ಏಪ್ರಿಲ್ 2014 (14:58 IST)
ಬೆಂಗಳೂರು: ನಗರ ಪ್ರದೇಶದಲ್ಲಿ 24 ಗಂಟೆ ವಿದ್ಯುತ್ ಪೂರೈಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 18 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 7 ಗಂಟೆಗಳ ಕಾಲ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳಿದರು.

ವಿದ್ಯುತ್ ದರ ಏರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲ.70 ದಿನ ಜಲವಿದ್ಯುತ್ ಉತ್ಪಾದನೆಗೆ ನೀರು ಇದೆ. ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಪೂರೈಕೆಯಿದೆ. 208 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಲಾಗಿದೆ ಎಂದು ಹೇಳಿದರು

ವೆಬ್ದುನಿಯಾವನ್ನು ಓದಿ