ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಗೊಂದಲಗಳಿರುವುದು ನಿಜ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸುತ್ತೇವೆ. ಆದರೆ, ಇಂದಿನ ಕಾರ್ಯಕಾರಣಿ ಸಭೆಯಲ್ಲಿ ಪಕ್ಷದಲ್ಲಿರುವ ಆಂತರಿಕ ಗೊಂದಲಗಳು ಕುರಿತು ಚರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆದ ಸಭೆಗೆ ಅತೃಪ್ತ ಶಾಸಕರು ಗೈರು ಹಾಜರಾಗಿರುವ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ, ಅತೃಪ್ತರ ಪಟ್ಟಿಯಲ್ಲಿ ನಾನಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ. ಆದರೆ, ಅಸಮಾಧಾನಗೊಂಡ 24 ಶಾಸಕರು ರಾಜ್ಯಾಧ್ಯಕ್ಷರ ವಿರುದ್ಧ ಪತ್ರ ಬರೆದಿರುವುದು ನಿಜ ಎಂದರು.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.