ಏರ್ ಪೋರ್ಟ್ ನಲ್ಲಿ 25.17 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ

ಶುಕ್ರವಾರ, 11 ಫೆಬ್ರವರಿ 2022 (16:22 IST)
ದುಬೈಯಿಂದ ಮಂಗಳೂರಿಗೆ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ ಮಾಡಿದ ಎರಡು ಪ್ರಕರಣಗಳನ್ನು ಪತ್ತೆಹಚ್ಚಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರಕರಣದಲ್ಲಿ ಒಟ್ಟು 25.17 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ.
ದುಬೈಯಿಂದ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಕಾಸರಗೋಡಿನ ಪ್ರಯಾಣಿಕನಲ್ಲಿ 7,40,500 ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಇನ್ನೊಂದು ಪ್ರಕರಣದಲ್ಲಿ ದುಬೈಯಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಮಂಗಳೂರಿನ ವ್ಯಕ್ತಿಯಲ್ಲಿ 17,77,500 ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ