ರಾಜ್ಯದ 10 ಜಿಲ್ಲೆಗಳ 25 ತಾಲ್ಲೂಕುಗಳು 'ಪ್ರವಾಹ ಪೀಡಿತ : ರಾಜ್ಯ ಸರ್ಕಾರ ಘೋಷಣೆ

ಗುರುವಾರ, 19 ಆಗಸ್ಟ್ 2021 (08:09 IST)
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ 10 ಜಿಲ್ಲೆಗಳ 25 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ರಶ್ಮಿ ಎಂ ಎಸ್ ಆದೇಶ ಹೊರಡಿಸಿದ್ದು, ರಲ್ಲಿ ಮುಂಗಾರು ಋತುವಿನ ಜುಲೈ 2021 ರಲ್ಲಿ ಅತಿವೃಷ್ಟಿ ಹಾಗೂ ನದಿ ಹರಿವಿನಿಂದ ಪ್ರವಾಹ ಸಂಭವಿಸಿದ್ದು, ಅಪಾರ ಪ್ರಮಾಣದಲ್ಲಿ ಜೀವ ಹಾನಿ, ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರಲಾಗಿರುತ್ತದೆ.
ಮುಂದುವರೆದು, ಜುಲೈ 2021 ರ ತಿಂಗಳಿನಲ್ಲಿ ಪ್ರವಾಹ ಎದುರಿಸಿದ ರಾಜ್ಯದ 10 ಜಿಲ್ಲೆಗಳ 25 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.
ದಾವಣಗೆರೆ, ಧಾರವಾಡ, ವಿಜಯಪುರ, ವಿಜಯನಗರ, ಗದಗ, ಬೆಳಗಾವಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಶಿವಮೊಗ್ಗ ಸೇರಿದಂತೆ 10 ಜಿಲ್ಲೆಗಳ 25 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಚನ್ನಗಿರಿ, ದಾವಣಗೆರೆ, ಅಣ್ಣಿಗೇರಿ, ಹುಬ್ಬಳ್ಳಿ ನಗರ, ಹುಬ್ಬಳ್ಳಿ ತಾಲ್ಲೂಕು, ಬಬಲೇಶ್ವರ, ನಿಡಗುಂದಿ, ಕೋಲ್ಹಾರ, ಮುದ್ದೆಬಿಹಾಳ, ಹರಪನಹಳ್ಳಿ, ಲಕ್ಷ್ಮೀಶ್ವರ, ಬೆಳಗಾವಿ, ಚಿಕ್ಕಮಗಳೂರು, ಕಡೂರು ತರೀಕೆರೆ, ಮೂಡಿಗೆರೆ, ಕೊಪ್ಪ, ಶೃಂಗೇರಿ, ದಾಂಡೇಲಿ, ಸೂಪ, ಮುಂಡಗೋಡು, ಆಲೂರು, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ಸೇರಿದಂತೆ 25 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಪ್ರವಾಹ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ ತಾಲ್ಲೂಕುಗಳಲ್ಲಿ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರ್ಕಾರದ ಆದೇಶ/ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರದ ಕಾರ್ಯದರ್ಶಿ ರಶ್ಮಿ ಎಂ.ಎಸ್ ಅವರು ಆದೇಶ ಹೊರಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ