ಈ ಊರಲ್ಲಿ ಕಳೆದ ಒಂಭತ್ತು ವರ್ಷಗಳಲ್ಲಿ 275 ಪೋಕ್ಸೊ ಕೇಸ್ ಗಳು ದಾಖಲಾಗಿವೆ.
ಹಾವೇರಿ ಜಿಲ್ಲೆಯಲ್ಲಿ 9 ವರ್ಷಗಳಲ್ಲಿ (2012 ರಿಂದ 2020 ಫೆಬ್ರುವರಿ ವರೆಗೆ) ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ (ಪೋಕ್ಸೊ) ಬರೋಬ್ಬರಿ 275 ಪ್ರಕರಣಗಳು ದಾಖಲಾಗಿವೆ.
ಈಗಾಗಲೇ 38 ಪ್ರಕರಣಗಳಲ್ಲಿ ಶಿಕ್ಷೆ ಜಾರಿಯಾಗಿದೆ ಎಂದು ಹಾವೇರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಪದ್ಮಾವತಿ ತಿಳಿಸಿದ್ದಾರೆ.
ಕಳೆದು ಹೋದ ಮಕ್ಕಳು, ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಓಡಿ ಹೋದ ಮಕ್ಕಳು, ವೈದ್ಯಕೀಯ ನೆರವು ಅಗತ್ಯವಿರುವ ಮಕ್ಕಳು, ಪೋಷಣೆ ಮತ್ತು ರಕ್ಷಣೆಯ ಅಗತ್ಯವಿರುವ ಎಲ್ಲ ಮಕ್ಕಳ ನೆರವಿಗಾಗಿ ‘ಮಕ್ಕಳ ಸಹಾಯವಾಣಿ– 1098’ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.