ಎಸ್ಸಿ/ಎಸ್ಪಿ ಯೋಜನೆಯಡಿ 28000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ

ಶುಕ್ರವಾರ, 20 ಮೇ 2022 (19:31 IST)
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳ ಸಾಲಿನಲ್ಲಿ 28000 ಕೋಟಿ ರೂ. ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಅವರು ಮಾಧ್ಯಮದ ಜೊತೆ ಕಾರ್ಯಕ್ರಮ ನಡೆಸಿದರು.
ಸಭೆಯಲ್ಲಿ ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಮತ್ತು ಎಷ್ಟು ಬಾಕಿ ಇದೆ ಎನ್ನುವುದನ್ನು ಪರಿಶೀಲಿಸಲಾಗಿದೆ. ಕೆಲವು ಯೋಜನೆಗಳಿಗೆ ಮಾತ್ರ ಬದಲಾವಣೆ ಮಾಡಿ ಉಳಿದವುಗಳಿಗೆ ಅನುಮೋದನೆ ನೀಡಲಾಗಿದೆ. ಬಜೆಟ್ ನಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ. ಕೃಷಿ ಇಲಾಖೆಗೆ 851 ಕೋಟಿ ರೂ.ಗಳಿದ್ದ ಅನುದಾನವನ್ನು 1061 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ತೋಟಗಾರಿಕೆ ಇಲಾಖೆಗೆ 142 ಕೋಟಿ ಅನುದಾನವನ್ನು 187 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.
ಆರೋಗ್ಯ ಇಲಾಖೆಗೆ 899 ಕೋಟಿ ರೂ.ಗಳನ್ನು ಕಳೆದ ವರ್ಷ ನೀಡಲಾಯಿತು. ಪ್ರಸಕ್ತ ಸಾಲಿನಲ್ಲಿ 1,300 ಕೋಟಿ ರೂ.ಗಳನ್ನು ನೀಡಲಾಗಿದೆ. ಸಹಕಾರ ಇಲಾಖೆಯಲ್ಲಿ ಎಸ್ಸಿ/ಎಸ್ಟಿ ಸಮುದಾಯದ ಜನರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಅವರು ನುಡಿದರು.
ಇಲಾಖೆಯಲ್ಲಿ ಪಿಂಚಣಿಗಳ ಮೊತ್ತವನ್ನು ಮಾಡಿದ್ದು, ಕಳೆದ ವರ್ಷ 2,900 ಕೋಟಿ ರೂ.ಗಳ ಅನುದಾನವನ್ನು ಈ ಬಾರಿ 3,748 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಡಿ 9,000 ಕೋಟಿ ರೂ.ಗಳ ಅನುದಾನವನ್ನು ಅವರು ವಿವರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ