ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಲಿಕ್ ಕ್ಲಿಕ್ ಮಾಡಿ ರಿಸಲ್ಟ್ ನೋಡಿ

Sampriya

ಮಂಗಳವಾರ, 9 ಏಪ್ರಿಲ್ 2024 (18:58 IST)
Photo Courtesy X
ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಮಾರ್ಚ್‌ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ನಡೆಯಿತು. ಇದರ ಫಲಿತಾಂಶವು ನಾಳೆ ಪ್ರಕಟಗೊಳ್ಳಲಿದ್ದು, ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದೆ ಎಂದು ತಿಳಿಸಲಾಗಿದೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಗ್ಗೆ 10 ಗಂಟೆಯ ನಂತರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದ್ಯಾಂತ ಒಟ್ಟು 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈಗ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಅಂಕಗಳನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ