ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲತಾಂಶ ಪ್ರಕಟ

ಸೋಮವಾರ, 12 ಸೆಪ್ಟಂಬರ್ 2022 (20:49 IST)
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.ಪರೀಕ್ಷೆಗೆ ಹಾಜರಾದ 1,75,905 ಅಭ್ಯರ್ಥಿಗಳ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.ಉತ್ತೀರ್ಣ ಪ್ರಮಾಣ ಶೇ. 37.08.ಈ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲಾಗಿತ್ತು.2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.ಇನ್ನು  ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://karresults.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ