ಕಾಫಿನಾಡಲ್ಲಿ ಬರಕ್ಕೆ 2ನೇ ಬಲಿ

ಶನಿವಾರ, 2 ಸೆಪ್ಟಂಬರ್ 2023 (17:30 IST)
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬರಕ್ಕೆ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ರೈತ ಪರಮೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಚಿಕ್ಕಮಗಳೂರಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗಿಲ್ಲ. ಮಳೆ ಬಾರದ ಹಿನ್ನೆಲೆ ಬೆಳೆ ನಾಶವಾಗಿವೆ. ಈ ಹಿನ್ನೆಲೆ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸಂಪೂರ್ಣವಾಗಿ ನಾಶವಾಗಿ ಹೋಗಿದೆ.. ಬೆಳೆ ಬೆಳೆಯಲು ಈತ ಸುಮಾರು 5 ಲಕ್ಷದವರೆಗೆ ಸಾಲ ಮಾಡಿಕೊಂಡಿದ್ದನಂತೆ. ಬೆಳೆ ಕೈಕೊಟ್ಟಿದ್ರಿಂದ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ.. ಅಜ್ಜಂಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಇನ್ನು  ಚಿಕ್ಕಮಗಳೂರು ಜಿಲ್ಲೆಯ ಗಿರಿಯಾಪುರ ರೈತ ಸತೀಶ್​​ ಸಹ ಬರದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ