BBMPಗೆ 3,332.72 ಕೋಟಿ ಆದಾಯ

ಬುಧವಾರ, 5 ಏಪ್ರಿಲ್ 2023 (15:50 IST)
ಪ್ರಸಕ್ತ ಆರ್ಥಿಕ ವರ್ಷದ ಮುಕ್ತಾಯಕ್ಕೆ BBMPಯ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ 3,332.72 ಕೋಟಿಗೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 250 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ. ಕಳೆದ 2021-22ನೇ ಸಾಲಿನಲ್ಲಿ 3,088 ಕೋಟಿ ಸಂಗ್ರಹವಾಗಿತ್ತು. 2022-23ನೇ ಸಾಲಿನಲ್ಲಿ 3,332.72 ಕೋಟಿ ಸಂಗ್ರಹವಾಗಿದೆ. ಅಧಿಕ ಮೊತ್ತದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿ ತಯಾರಿಸಿ ವಸೂಲಿ ಮಾಡುವುದು. ಕಂದಾಯ ವಸೂಲಿ ಅಧಿಕಾರಿಗಳಿಗೆ ನಿರ್ದಿಷ್ಟಗುರಿ ನೀಡುವುದು. ಬೆಸ್ಕಾಂ ಸೇರಿದಂತೆ ವಿವಿಧ ಸಾರ್ವಜನಿಕ ಇಲಾಖೆಗೆ ನೀಡಿದ ದಾಖಲೆ ಆಧರಿಸಿ ಪರಿಶೀಲಿಸುವುದು ಸೇರಿದಂತೆ ವಿವಿಧ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ವಸೂಲಿ ಹೆಚ್ಚಳವಾಗಿದೆ. ಜತೆಗೆ, ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿಗೆ ಇರುವ ವ್ಯವಸ್ಥೆಯ ಸುಧಾರಣೆ, ತೆರಿಗೆ ವಸೂಲಿಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪ್ರಶಸ್ತಿ, ಸನ್ಮಾನಿಸಲು ಮುಂದಾಗಿರುವುದು ಸಹ ತೆರಿಗೆ ಹೆಚ್ಚಳಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ