3.5 ಲಕ್ಷ ಮೌಲ್ಯದ ವಸ್ತುಗಳು ಕಳವು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಆವರಣದಿಂದ 3.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್ಗೆ ಸಂಬಂಧಿಸಿದ ಸಾಮಗ್ರಿಗಳು ನಾಪತ್ತೆಯಾಗಿವೆ.
ಈ ಹಿನ್ನೆಲೆಯಲ್ಲಿ ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ ರಂದು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್1 ಮತ್ತು ಟರ್ಮಿನಲ್ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.