ಸಾಹಿತ್ಯ ಸಮ್ಮೇಳನಕ್ಕೆ ಸರಕಾರಿ ನೌಕರರಿಂದ 3 ಕೋಟಿ ದೇಣಿಗೆ
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರಿಂದ ಒಂದು ದಿನದ ವೇತನ ರೂಪವಾಗಿ 3 ಕೋಟಿ ರೂ.ಗಳ ದೇಣಿಗೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ, ನೃಪತುಂಗನ ನಾಡಿನಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಜಿಲ್ಲೆಯ ನೌಕರ ಬಾಂಧವರು ತಮ್ಮ ಒಂದು ದಿನದ ವೇತನ ದೇಣಿಗೆ ನೀಡುವುದರ ಮೂಲಕ ಸಮ್ಮೇಳನದ ಯಶಸ್ವಿಗೆ ಅಗತ್ಯ ಆರ್ಥಿಕ ಸಹಕಾರ ನೀಡಿರುವುದಕ್ಕೆ ವಿಶೇಷವಾಗಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮತ್ತು ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರಿಗೆ ಜಿಲ್ಲಾಡಳಿತ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.