ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇಂದಿನಿಂದ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ನವೆಂಬರ್ 4ರವರೆಗೆ ಕರಾವಳಿ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.